ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದ ಅಂಬೇಡ್ಕರ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ತಮಟೆ ಚಳವಳಿ ನಡೆಸಲಾಯಿತು.
ಅಂಬೇಡ್ಕರ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲು ಒತ್ತಾಯ: ರೈತ ಸಂಘಟನೆ ಕಾರ್ಯಕರ್ತರಿಂದ ತಮಟೆ ಚಳವಳಿ - Haveri
ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದ ಅಂಬೇಡ್ಕರ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು, ಡಿಎಸ್ಎಸ್ ಕಾರ್ಯಕರ್ತರು ಹಾಗೂ ರೈತ ಸಂಘಟನೆ ಕಾರ್ಯಕರ್ತರಿಂದ ತಮಟೆ ಚಳವಳಿ ನಡೆಸಲಾಯಿತು.
ತಮಟೆ ಚಳುವಳಿ
ಗ್ರಾಮಸ್ಥರು, ಡಿಎಸ್ಎಸ್ ಕಾರ್ಯಕರ್ತರು ಹಾಗೂ ರೈತ ಸಂಘಟನೆ ಕಾರ್ಯಕರ್ತರು ಹಾವೇರಿ ನಗರದ ಡಿಸಿ ಕಚೇರಿ ಎದುರು ತಮಟೆ ಚಳುವಳಿ ನಡೆಸಿದರು. ರಾಣೆಬೆನ್ನೂರು ಶಾಸಕ ಅರುಣಕುಮಾರ ಪೂಜಾರ ಹಾಗೂ ತಹಶೀಲ್ದಾರ ಬಸನಗೌಡ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಮೀನಾವೇಷ ಮಾಡುತ್ತಿದ್ದಾರೆ ಎಂದು ಶಾಸಕ ಪೂಜಾರ ಹಾಗೂ ತಹಶೀಲ್ದಾರ್ ಬಸನಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಡಿಎಸ್ಎಸ್ ಕಾರ್ಯಕರ್ತರು ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆಯೂ ಒತ್ತಾಯಿಸಿದರು.