ರಾಣೆಬೆನ್ನೂರ:ಕಳೆದೆರಡು ದಿನಗಳಿಂದ ಹಾವೇರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ರಾಣೆಬೆನ್ನೂರು ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಬಳಿ ಟಾಟಾ ಏಸ್ ವಾಹನವೊಂದು ಹಳ್ಳದಲ್ಲಿ ಕೊಚ್ಚಿಕೊಂಡು ಹೋಯಿತು.
ರಾಣೆಬೆನ್ನೂರು: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ವಾಹನ - ರಾಣೆಬೇನ್ನೂರು ಟಾಟಾ ಏಸ್
ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ವಾಹನವೊಂದು ಕೊಚ್ಚಿ ಹೋಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಹಳ್ಳದಲ್ಲಿ ಕೊಚ್ಚಿ ಹೋದ ವಾಹನ
ಚಿಕ್ಕಹರಳಹಳ್ಳಿ ಗ್ರಾಮದ ಗುಡ್ಡಪ್ಪ ಎಂಬುವರು ನಿನ್ನೆ ತಡರಾತ್ರಿ ತಮ್ಮ ವಾಹನ ತಗೆದುಕೊಂಡು ಗ್ರಾಮಕ್ಕೆ ತೆರಳುತ್ತಿದ್ದರು. ಈ ಸಮಯದಲ್ಲಿ ಯತ್ನಳ್ಳಿ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಲೆಕ್ಕಿಸದೆ ವಾಹನ ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಪರಿಣಾಮ, ನೀರಿನ ರಭಸಕ್ಕೆ ವಾಹನ ಕೊಚ್ಚಿಕೊಂಡು ಹೋಗಿದೆ.
ಅದೃಷ್ಟವಶಾತ್ ಗುಡ್ಡಪ್ಪ ವಾಹನ ಬಿಟ್ಟು ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೀರಿನಲ್ಲಿ ಕೊಚ್ಚಿ ಹೋದ ವಾಹನದ ಮೇಲ್ಭಾಗ ಮಾತ್ರ ಕಾಣುತ್ತಿದ್ದು, ನೀರಿನಿಂದ ಮೇಲೆತ್ತಲು ಸಾರ್ವಜನಿಕರು ಮುಂದಾಗಿದ್ದಾರೆ.