ಹಾವೇರಿ: ತಾಲೂಕಿನ ಮರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಡಿಡಿಪಿಐ ಅಂದಾನಪ್ಪ ವಡಗೇರಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಕೊರೊನಾಗೆ ಮತ್ತೋರ್ವ ಶಿಕ್ಷಕ ಬಲಿ - Haveri Latest News
ಹಾವೇರಿ ತಾಲೂಕಿನ ಮರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿನ ಶಿಕ್ಷಕರ ಮರಣದ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಹಾವೇರಿಯಲ್ಲಿ ಕೊರೊನಾಗೆ ಮತ್ತೋರ್ವ ಶಿಕ್ಷಕ ಬಲಿ
ಐವತ್ತೈದು ವರ್ಷದ ಶಿಕ್ಷಕ ಕಳೆದ ಹದಿನಾಲ್ಕು ದಿನಗಳಿಂದ ಜಿಲ್ಲಾಸ್ಪತ್ರೆಯ ಕೋವಿಡ್-19 ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿನ ಶಿಕ್ಷಕರ ಮರಣದ ಸಂಖ್ಯೆ ಹದಿನೆಂಟಕ್ಕೆ ಏರಿಕೆಯಾಗಿದೆ.