ಹಾನಗಲ್:ತಾಲೂಕಿನ ಶಿಕ್ಷಕರ ತಂಡ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಬೋಧನೆ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ ಮಾಡುತ್ತಿರುವ ಶಿಕ್ಷಕರು
ಕೊರೊನಾ ವೈರಸ್ ಕಾರಣದಿಂದ ಶಾಲೆಗಳು ಇನ್ನೂ ಪ್ರಾರಂಭವಾಗಿಲ್ಲ. ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಬಾರದು ಎಂಬ ಉದ್ದೇಶದಿಂದ ತಾಲೂಕಿನ ಬಹುತೇಕ ಶಿಕ್ಷಕರು ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡುತ್ತಿದ್ದಾರೆ.
ಕೊರೊನಾ ವೈರಸ್ ಕಾರಣದಿಂದ ಶಾಲೆಗಳು ಇನ್ನೂ ಪ್ರಾರಂಭವಾಗಿಲ್ಲ. ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಬಾರದು ಎಂಬ ಉದ್ದೇಶದಿಂದ ತಾಲೂಕಿನ ಬಹುತೇಕ ಶಿಕ್ಷಕರು ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡುತ್ತಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಯಳ ಬಗ್ಗೆ ಮಾಹಿತಿ ಪಡೆಯುತ್ತಿರುವುದು ಮಾದರಿ ಎನಿಸಿದೆ.
ಇದೀಗ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಕರ ಈ ಕಾಳಜಿಯಿಂದ ಪ್ರತಿನಿತ್ಯ ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಕನ್ನಡ, ಆಂಗ್ಲ ಭಾಷೆಯ ಅಕ್ಷರಗಳ ವಿಡಿಯೋ ಚಿತ್ರ, ಮೊಬೈಲ್ ಪಾಠ ವಿಡಿಯೋಗಳನ್ನ ತೋರಿಸಿ ಮಕ್ಕಳ ವಿದ್ಯಾಭ್ಯಾಸವನ್ನ ವೃದ್ಧಿಸಲು ಪ್ರಯತ್ನಿಸುತ್ತಿದ್ದಾರೆ. ಶಿಕ್ಷಕರು ಈ ರೀತಿ ಮನೆ ಬಾಗಲಿಗೆ ಬಂದು ಪಾಠ ಮಾಡುವುದನ್ನು ಕಂಡ ವಿದ್ಯಾರ್ಥಿಗಳ ಪಾಲಕರು ಪ್ರಶಂಸೆ ವ್ಯಕ್ತಪಡಿಸುತಿದ್ದಾರೆ.