ಹಾವೇರಿ : ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ದೇವರ ಮೈಮೇಲಿನ ಚಿನ್ನಾಭರಣ ಹಾಗೂ ಕಾಣಿಕೆ ಡಬ್ಬಿ ಹೊತ್ತೊಯ್ದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ನಡೆದಿದೆ.
ದೇವರಿಗೆ ಕನ್ನ: ದೇಗುಲದ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು - haveri news
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಮಾಲತೇಶ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ್ದಾರೆ.
![ದೇವರಿಗೆ ಕನ್ನ: ದೇಗುಲದ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು](https://etvbharatimages.akamaized.net/etvbharat/prod-images/768-512-4183582-thumbnail-3x2-chai.jpg)
ಮಾಲತೇಶ ದೇವಸ್ಥಾನ
ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು
ಗ್ರಾಮದ ಮಾಲತೇಶ ದೇವಸ್ಥಾನದಲ್ಲಿ ಈ ಕಳ್ಳತನ ನಡೆದಿದ್ದು, ರಾತ್ರಿ ದೇವಸ್ಥಾನಕ್ಕೆ ನುಗ್ಗಿರೋ ಕಳ್ಳರು ದೇವಸ್ಥಾನದ ಬಾಗಿಲು ಮುರಿದು ದೇವಸ್ಥಾನ ಪ್ರವೇಶಿಸಿದ್ದಾರೆ. ಕಾಣಿಕೆ ಡಬ್ಬಿ ಹೊತ್ತೊಯ್ದು ಅದರಲ್ಲಿದ್ದ ಹಣವನ್ನ ದೋಚಿ ನಂತರ ದೇವಸ್ಥಾನದ ಸಮೀಪದಲ್ಲಿ ಡಬ್ಬಿ ಎಸೆದು ಹೋಗಿದ್ದಾರೆ. ಸುಮಾರು ಇಪ್ಪತ್ತೈದು ಸಾವಿರಕ್ಕೂ ಅಧಿಕ ಮೌಲ್ಯದ ಹಣ ಮತ್ತು ಚಿನ್ನಾಭರಣ ಕಳ್ಳತನ ಆಗಿದೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಆಡೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.