ಹಾವೇರಿ: ವಿಧಾನಪರಿಷತ್‌ಗೆ ನಡೆಯುತ್ತಿರುವ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ: ಜಗದೀಶ ಶೆಟ್ಟರ್ ವಿಶ್ವಾಸ - ವಿಧಾನಸಭೆಯ ಎರಡು ಕ್ಷೇತ್ರಗಳ ಚುನಾವಣೆ
ರಾಜರಾಜೇಶ್ವರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯಸಾಧಿಸಿ ಯಡಿಯೂರಪ್ಪ ಸರ್ಕಾರವನ್ನ ಮತ್ತಷ್ಟು ಭದ್ರಗೊಳಿಸಲಿದ್ದಾರೆ ಎಂದು ಹೇಳಿದರು.
ಜಗದೀಶ ಶೆಟ್ಟರ್ ವಿಶ್ವಾಸ
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಈ ಜಯದಿಂದಾಗಿ ತಮ್ಮ ಪಕ್ಷ ಪರಿಷತ್‌ನಲ್ಲಿ ಬಹುಮತದತ್ತ ದಾಪುಗಾಲಿಡುತ್ತದೆ ಎಂದು ತಿಳಿಸಿದರು. ಇದೇ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದರು.