ಹಾವೇರಿ: ಆಕಳಿಗೆ ನೀರು ಕುಡಿಸಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೇರೂರು ತಾಲೂಕಿನ ಹಂಸಭಾವಿ ಗ್ರಾಮದ ದುರ್ಗಾದೇವಿ ಕೆರೆಯಲ್ಲಿ ನಡೆದಿದೆ.
ಹಸುಗೆ ನೀರು ಕುಡಿಸಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವು - boy died in lake at haveri
ಹಾವೇರಿ ಜಿಲ್ಲೆಯಲ್ಲಿ ಆಕಳಿಗೆ ನೀರು ಕುಡಿಸಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಬಾಲಕ ಕೆರೆಯಲ್ಲಿ ಮುಳುಗಿ ಸಾವು
ಪ್ರಮೋದ ಪಾಟೀಲ (12) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕನ ಮೃತದೇಹವನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಈ ಸಂಬಂಧ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.