ಹಾವೇರಿ : ಜಿಲ್ಲೆಯ ರಾಣೇಬೆನ್ನೂರು ಮತ್ತು ಹಿರೇಕೆರೂರು ಕ್ಷೇತ್ರಗಳ ಶಾಂತಿಯುತ ಉಪಚುನಾವಣೆಗೆ ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆಯೆಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೈ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ ದೇವರಾಜ ಇಂದು ಜಂಟಿಯಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಣೇಬೆನ್ನೂರು ಮತ್ತು ಹಿರೇಕೆರೂರು ಕ್ಷೇತ್ರಗಳ ಉಪಚುನಾವಣೆಗೆ ಜಿಲ್ಲಾಡಳಿತ ಸಿದ್ಧ
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಮತ್ತು ಹಿರೇಕೆರೂರು ಕ್ಷೇತ್ರಗಳ ಶಾಂತಿಯುತ ಉಪಚುನಾವಣೆಗೆ ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆಯೆಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೈ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ ದೇವರಾಜ ಇಂದು ಜಂಟಿಯಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಚುನಾವಣೆ ಘೋಷಣೆ ಆಗಿದ್ದರಿಂದ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ 18 ಸಾವಿರದಾ 396 ಪುರುಷ ಮತದಾರರು ಮತ್ತು 1 ಲಕ್ಷ 14 ಸಾವಿರದಾ 76 ಮಹಿಳಾ ಮತದಾರರಿದ್ದಾರೆ. ಅದ್ರಂತೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ 94 ಸಾವಿರದಾ 238 ಪುರುಷ ಮತದಾರರು ಮತ್ತು 88 ಸಾವಿರದಾ 554 ಮಹಿಳಾ ಮತದಾರರಿದ್ದಾರೆ. ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತ ಚುನಾವಣೆ ನಡೆಸೋ ಸಂಬಂಧ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆಯೆಂದು ಕೆ.ಜಿ ದೇವರಾಜ ಮಾಹಿತಿ ನೀಡಿದರು.
ಎರಡೂ ಕ್ಷೇತ್ರಗಳಲ್ಲಿ ಕೆಲವು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಚುನಾವಣಾ ಸಮಯದಲ್ಲಿ ಅಕ್ರಮಗಳು ನಡೆಯದಂತೆ ಪೊಲೀಸ್ ಇಲಾಖೆ ಎರಡೂ ಕ್ಷೇತ್ರಗಳಲ್ಲಿ ಚೆಕ್ ಪೋಸ್ಟ್ಗಳನ್ನ ತೆರೆದು ಶಾಂತಿಯುತ ಚುನಾವಣೆ ನಡೆಸೋದಾಗಿ ತಿಳಿಸಿದರು.