ಹಾವೇರಿ:ವಾಲ್ಮೀಕಿ ಜಯಂತಿ ಆಚರಣೆ ಹಿನ್ನಲೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ನಾಲ್ವರಿಗೆ ಗಾಯವಾಗಿರುವ ಘಟನೆ ನಡೆದಿದೆ.
ವಾಲ್ಮೀಕಿ ಜಯಂತಿ ಪ್ರಯುಕ್ತ ಮೆರವಣಿಗೆ ವೇಳೆ ಗುಂಪು ಘರ್ಷಣೆ - ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ
ವಾಲ್ಮೀಕಿ ಜಯಂತಿ ಆಚರಣೆ ಹಿನ್ನಲೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ನಾಲ್ವರಿಗೆ ಗಾಯವಾಗಿರುವ ಘಟನೆ ನಡೆದಿದೆ.
ವಾಲ್ಮೀಕಿ ಜಯಂತಿ ಪ್ರಯುಕ್ತ ಮೆರವಣಿಗೆ ವೇಳೆ ಗುಂಪು ಘರ್ಷಣೆ
ಜಿಲ್ಲೆಯ ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೆರವಣಿಗೆ ಸಾಗೋ ಮಾರ್ಗದ ವಿಚಾರವಾಗಿ ಘರ್ಷಣೆಯಾಗಿದೆ ಎನ್ನಲಾಗಿದೆ. ಫಕ್ಕಿರೇಶ ಕೆಂಪರಾಮಣ್ಣವರ, ಭರಮಪ್ಪ ಓಲೇಕಾರ, ಶಿವರಾಜ ರಾಮಣ್ಣವರ ಮತ್ತು ಶಿವಪ್ಪ ಮಾಳಗಿ ಗಾಯಗೊಂಡವರು.
ಸದ್ಯ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.