ಕರ್ನಾಟಕ

karnataka

ETV Bharat / state

ಲಂಚ ಪಡೆಯುವಾಗ ಎಸಿಬಿ ಬೆಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಹಾವೇರಿ ಎಸಿಬಿ ಡಿವೈಸ್​​​ಪಿ ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The village accountant detained  from  ACB for  when receiving a bribe
ಲಂಚ ಪಡೆಯುವಾಗ ಎಸಿಬಿ ಬೆಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

By

Published : Jan 5, 2021, 7:52 PM IST

ಹಾವೇರಿ:4 ಸಾವಿರ ರೂಪಾಯಿ ಲಂಚ ಪಡೆಯುವಾಗ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ ಬಿದ್ದಿದ್ದಾನೆ. ಜಿಲ್ಲೆಯ ರಟ್ಟಿಹಳ್ಳಿಯ ವಿಶ್ವನಾಥ್ ಉಚ್ಚಲದಡ್ಡಿ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿಯಾಗಿದ್ದಾನೆ.

ವೀರೇಶ ಬೆಣ್ಣಿ ಎಂಬುವರರ ಆಸ್ತಿ ಪೋಡಿ ಮಾಡಿಕೊಡಲು ವಿಶ್ವನಾಥ್ 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಗ್ರಾಮ ಲೆಕ್ಕಿಗರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ವಿಶ್ವನಾಥ್ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಹಾವೇರಿ ಎಸಿಬಿ ಡಿವೈಸ್​​​ಪಿ ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲಂಚಕ್ಕೆ ಬೇಡಿಕೆ ಇಟ್ಟ ಎಸ್​​ಡಿಎ ಅಧಿಕಾರಿ: ರೆಡ್ ‌ಹ್ಯಾಂಡ್‌ ಆಗಿ ಎಸಿಬಿ ಬಲೆಗೆ

ABOUT THE AUTHOR

...view details