ಹಾವೇರಿ:ಸ್ನೇಹಿತರ ಜೊತೆಗೆ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾವೇರಿ: ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು - ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮ
ಸ್ನೇಹಿತರ ಜೊತೆಗೆ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾವನ್ನಪ್ಪಿದ ಯುವಕ
ಮೃತ ಯುವಕನನ್ನು ಇಪ್ಪತ್ತೆರಡು ವರ್ಷ ವಯಸ್ಸಿನ ಜಬೀವುಲ್ಲಾ ಆಡೂರ ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹ ಹೊರತೆಗೆದಿದ್ದಾರೆ.ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.