ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಇಲ್ಲ. ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವೆಯೇ ಪೈಪೋಟಿ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವೆಯೇ ಪೈಪೋಟಿಯಿದೆ: ಬಸವರಾಜ್ ಬೊಮ್ಮಾಯಿ
ಕಾಂಗ್ರೆಸ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಇದೆ. ಅವರಿಬ್ಬರ ನಡುವಿನ ಪೈಪೋಟಿ ಕಾಂಗ್ರೆಸ್ ಅನ್ನು ಪಂಕ್ಚರ್ ಆದ ಬಸ್‌ನಂತೆ ಮಾಡಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಲೇವಡಿ ಮಾಡಿದರು.
ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವೆಯೇ ಪೈಪೋಟಿಯಿದೆ: ಬಸವರಾಜ್ ಬೊಮ್ಮಾಯಿ
ಓದಿ:ಐಪಿಎಸ್ ಅಧಿಕಾರಿಗಳ ಜಟಾಪಟಿ ಸಂಬಂಧ ಮುಖ್ಯ ಕಾರ್ಯದರ್ಶಿ ಮಾತನಾಡಿದ್ದಾರೆ: ಬೊಮ್ಮಾಯಿ
ನನಗೆ ಗೃಹ ಸಚಿವ ಎಂಬ ಅಹಂ ಇಲ್ಲ. ನಾನು ಕ್ಷೇತ್ರದ ಹೊರಗೆ ಮಾತ್ರ ಸಚಿವ. ಕ್ಷೇತ್ರಕ್ಕೆ ಬಂದರೆ ನಾನು ಬಸವರಾಜ ಮಾತ್ರ ಎಂದು ಅವರು ತಿಳಿಸಿದರು.