ರಾಣೆಬೆನ್ನೂರ: ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಒಂದೂ ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ. ಇದು ಸುಳ್ಳು ಸುದ್ದಿ ಎಂದು ಶಾಸಕ ಅರುಣಕುಮಾರ ಪೂಜಾರ್ ಸ್ಪಷ್ಟಪಡಿಸಿದರು.
ರಾಣೆಬೆನ್ನೂರಲ್ಲಿ ಕೊರೊನಾ ಪಾಸಿಟಿವ್ ಕೇಸ್ ಇಲ್ಲ: ಶಾಸಕ ಅರುಣಕುಮಾರ ಪೂಜಾರ್ - ಕೊರೊನಾ ವೈರಸ್
ಸಾಮಾಜಿಕ ಜಾಲತಾಣದಲ್ಲಿ ಕೆಲ ಕಿಡಿಗೇಡಿಗಳು ರಾಣೆಬೆನ್ನೂರು ತಾಲೂಕಿನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ ಅದು ಸತ್ಯಕ್ಕೆ ದೂರವಾಗಿದೆ. ತಾಲೂಕಿನಲ್ಲಿ ಇದುವರೆಗೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಶಾಸಕ ಅರುಣಕುಮಾರ ಪುಜಾರ್ ಹೇಳಿದರು.
ಶಾಸಕ ಅರುಣಕುಮಾರ ಪೂಜಾರ್
ಕೇಲ ಕಿಡಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಜನರಲ್ಲಿ ಭಯ ಮೂಡಿಸುತ್ತಿದ್ದಾರೆ. ಇಂತಹ ಸುದ್ದಿಗಳನ್ನು ಯಾರೂ ನಂಬಬಾರದು ಎಂದು ಶಾಸಕರು ಹೇಳಿದರು.
ರಾಣೆಬೆನ್ನೂರು ಜನತೆ ಲಾಕಡೌನ್ಗೆ ಉತ್ತಮವಾಗಿ ಸ್ಪಂದಿಸುವ ಮೂಲಕ ಕೊರೊನಾ ತಡೆಗಟ್ಟುವಲ್ಲಿ ಸಹಕಾರ ನೀಡಿದ್ದಾರೆ. ಕೇಂದ್ರ ಸರ್ಕಾರ ಹಾವೇರಿ ಜಿಲ್ಲೆಯನ್ನು ಹಸಿರು ವಲಯ ಎಂದು ಗುರುತಿಸಿದೆ. ಇದಕ್ಕೆ ಕಾರಣವಾದ ತಾಲೂಕು ಆಡಳಿತ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ಹಾಗೂ ಪೌರಕಾರ್ಮಿಕರಿಗೆ ನಾವು ಕೃತಜ್ಞತೆ ಸಲ್ಲಿಸಬೇಕಾಗಿದೆ ಎಂದರು.