ಹಾವೇರಿ:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ರಾಣೇಬೆನ್ನೂರಿನ ಮೂವರು ಬಿಜೆಪಿಯ ಕಾರ್ಯಕರ್ತರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘು ಬಗಾಡೆ, ಗ್ರಾಮೀಣ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮನೋಜ ಡೊಳ್ಳಿನ ಹಾಗೂ ನಗರ ಯುವ ಮೋರ್ಚಾ ಉಪಾಧ್ಯಕ್ಷ ಚೇತನ ರಾಜೀನಾಮೆ ನೀಡಿರುವ ಕಾರ್ಯಕರ್ತರು.
ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿಯ ಮೂವರು ಕಾರ್ಯಕರ್ತರ ರಾಜೀನಾಮೆ - Etv Bharat Kannada
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡಿಸಿ ಹಂತಕರನ್ನು ಬಂಧಿಸಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿ ರಾಣೇಬೆನ್ನೂರಿನ ಮೂವರು ಬಿಜೆಪಿ ಕಾರ್ಯಕರ್ತರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
![ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿಯ ಮೂವರು ಕಾರ್ಯಕರ್ತರ ರಾಜೀನಾಮೆ Kn_hvr_01_bjp_raajename_7202143](https://etvbharatimages.akamaized.net/etvbharat/prod-images/768-512-15945315-thumbnail-3x2-vny.jpg)
ರಾಜೀನಾಮೆ ನೀಡಿದ ಬಿಜೆಪಿ ಕಾರ್ಯಕರ್ತರು
ಈ ಹಿಂದೆ ಹಿಂದೂ ಯುವಕ ಹರ್ಷನ ಹತ್ಯೆಯಾಗಿತ್ತು. ಇದೀಗ ಪ್ರವೀಣ್ ನೆಟ್ಟಾರು ಕೊಲೆಯಾಗಿದೆ. ರಾಜ್ಯ ಸರ್ಕಾರ ಹಂತಕರನ್ನು ಕೂಡಲೇ ಬಂಧಿಸಿ, ಶಿಕ್ಷೆ ನೀಡಬೇಕು. ಮುಂದೆ ಇಂತಹ ಘಟನೆಗಳ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮೂವರು ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ... ಕಾರಣ?