ಹಾವೇರಿ:ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು - ಬ್ಯಾಡಗಿ ಪೊಲೀಸ್ ಠಾಣೆ
ಹಾವೇರಿ ಜಿಲ್ಲೆ ಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು
ಮೃತರನ್ನ ಕೊಟ್ರೇಶ ಹಗರಿಬೊಮ್ಮನಹಳ್ಳಿ 45 ವರ್ಷ, ಆನಂದಕುಮಾರ.ಎಸ್.ಕೆ 38 ವರ್ಷ ಮತ್ತು ಸತೀಶ ಕುಮಾರ.ಪಿ.ಎಸ್ 28 ವರ್ಷ ಎಂದು ಗುರುತಿಸಲಾಗಿದೆ.
ಪ್ರದೀಪ.ಬಿ.ಎಸ್ 30 ವರ್ಷ ಎಂಬಾತನಿಗೆ ಗಾಯಗೊಂಡಿದ್ದು ಗಾಯಾಳನ್ನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ದಾವಣಗೆರೆಯಿಂದ ಗೋವಾದತ್ತ ತೆರಳುತ್ತಿತ್ತು ಎನ್ನಲಾಗಿದ್ದು,ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.