ಕರ್ನಾಟಕ

karnataka

ETV Bharat / state

ಬಾಗಲಕೋಟೆ, ಹಾವೇರಿ ಜಿಲ್ಲೆಗಳ ಇಂದಿನ ಕೊರೊನಾ ವರದಿ...

ಬಾಗಲಕೋಟೆ, ಹಾವೇರಿ ಜಿಲ್ಲೆಗಳ ಇಂದಿನ ಕೊರೊನಾ ಅಂಕಿ-ಅಂಶದ ಸಂಪೂರ್ಣ ವರದಿ ಈ ಕೆಳಗಿನಂತಿದೆ..

today-corona-report-on-bagalkot-and-haveri-districts
ಬಾಗಲಕೋಟೆ, ಹಾವೇರಿ ಜಿಲ್ಲೆಗಳ ಇಂದಿನ ಕೊರೊನಾ ವರದಿ...

By

Published : Oct 22, 2020, 8:32 PM IST

ಹಾವೇರಿ:

ಜಿಲ್ಲೆಯಲ್ಲಿ ಗುರುವಾರ 97 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,268 ಕ್ಕೇರಿದೆ. ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 54 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಬ್ಯಾಡಗಿ 02, ಹಾನಗಲ್ 44, ಹಾವೇರಿ 08, ಹಿರೇಕೆರೂರು 16, ರಾಣೆಬೆನ್ನೂರು 13, ಸವಣೂರು 03, ಶಿಗ್ಗಾವಿ 10 ಹಾಗೂ ಇತರ ಜಿಲ್ಲೆಯ ಓರ್ವರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ 389 ಜನ ಹೋಂ ಐಸೋಲೇಷನ್‌ನಲ್ಲಿದ್ದು, ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 93 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಲಕೋಟೆ:

ಜಿಲ್ಲೆಯಲ್ಲಿ 258 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 59 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ಗುರುವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,817 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12,015 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ 23, ಬಾದಾಮಿ 1, ಬೀಳಗಿ 2, ಹುನಗುಂದ 12, ಮುಧೋಳ 14, ಜಮಖಂಡಿ 7 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್ ನಲ್ಲಿ ಪರಿಕ್ಷಿಸಲಾಗುತ್ತಿದ್ದ 1297 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,42,487 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,27,862 ನೆಗಟಿವ್ ಪ್ರಕರಣ, ಹಾಗೂ 129 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 673 ಮಾತ್ರ ಸಕ್ರಿಯ ಪ್ರಕರಣಗಳು ಇವೆ.

ABOUT THE AUTHOR

...view details