ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರದಿಂದ ಮಂಗಳವಾರದವರೆಗೆ ಕಠಿಣ ಲಾಕ್ಡೌನ್ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಯಮ ಮೀರಿ ಹೊರಗೆ ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಕೆ.ಜಿ. ದೇವರಾಜ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಔಷಧಿ, ಹಾಲು ಆಸ್ಪತ್ರೆ ಹೊರತುಪಡಿಸಿ ಯಾವುದೇ ಅಂಗಡಿಗಳು ತೆರೆಯುವದಿಲ್ಲ. ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಅಧಿಕವಾಗುತ್ತಿದೆ. ಸರ್ಕಾರ ಜಾರಿಗೆ ತಂದಿರುವ ಲಾಕ್ಡೌನ್ ಮಧ್ಯೆ ಸಹ ಕೆಲವರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೆ ಅನಗತ್ಯ ಓಡಾಡುವವರಿಗೆ ದಂಡ ಹಾಕಿದರೂ ಕೇರ್ ಮಾಡುತ್ತಿಲ್ಲ.