ರಾಣೆಬೆನ್ನೂರು:ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿರವ ಘಟನೆ ರಾಣೆಬೆನ್ನೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ವ್ಯಕ್ತಿ ಸಾವು - ಟ್ರಾಕ್ಟರ್ ಇಂಜಿನ್ ಪಲ್ಟಿಯಾಗಿ ವ್ಯಕ್ತಿ ಸಾವು
ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಟ್ರಾಕ್ಟರ್ ಇಂಜಿನ್ ಪಲ್ಟಿಯಾಗಿ ವ್ಯಕ್ತಿ ಸಾವು
ಕಮದೋಡ ಗ್ರಾಮದ ದುರಗಪ್ಪ ದೊಣ್ಣೆಪ್ಪ ದಾಸಪ್ಪನವರ(32) ಮೃತಪಟ್ಟ ವ್ಯಕ್ತಿ. ಈತ ನಾಗೇನಹಳ್ಳಿ ಗ್ರಾಮದಿಂದ ಟ್ರ್ಯಾಕ್ಟರ್ನಲ್ಲಿ ಕಲ್ಲು ಹೇರಿಕೊಂಡು ಬರುತ್ತಿದ್ದ ವೇಳೆ ಸುಮಾರು ನಾಲ್ಕು ಅಡಿ ಎತ್ತರದ ಬದುವನ್ನು ಹತ್ತಿಸಿದ್ದಾನೆ. ಇದರಿಂದ ಇಂಜಿನ್ ಪಲ್ಟಿಯಾಗಿ ದುರಗಪ್ಪನ ಮೈ ಮೇಲೆ ಬಿದ್ದಿದೆ. ಇದರಿಂದ ದುರಗಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.