ಹಾವೇರಿ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಟ್ರ್ಯಾಕ್ಟರ್ ಉರುಳಿ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್: ಬಾಲಕಿ ಸಾವು - haveri death news
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಟ್ರ್ಯಾಕ್ಟರ್ ಉರುಳಿ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ ನಡೆದಿದೆ.
ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್
ಅಪಘಾತದಲ್ಲಿ ಎಂಟು ಜನರಿಗೆ ಗಂಭೀರ ಗಾಯವಾಗಿದ್ದು, ಮೃತ ಬಾಲಕಿಯ ಹೆಸರು ತಿಳಿದು ಬಂದಿಲ್ಲ. ಗಾಯಾಳುಗಳಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಟ್ರ್ಯಾಕ್ಟರ್ನಲ್ಲಿದ್ದವರು ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದವರು ಎನ್ನಲಾಗಿದೆ. ಕರಡಿಕೊಪ್ಪ ಗ್ರಾಮದಿಂದ ಶಿಶುವಿನಹಾಳ ಶರೀಫರ ಜಾತ್ರೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಇನ್ನು ಸ್ಥಳಕ್ಕೆ ಶಿಗ್ಗಾಂವಿ ಸಿಪಿಐ ಬಸವರಾಜ ಹಲಬಣ್ಣನವರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.