ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ, ಹಾವೇರಿಯಲ್ಲಿ ಸಾರಿಗೆ ನೌಕರರ ವಿಭಿನ್ನ ಪ್ರತಿಭಟನೆ - ಹುಬ್ಬಳ್ಳಿ, ಹಾವೇರಿಯಲ್ಲಿ ಪ್ರತಿಭಟನೆ

ಒಂಬತ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾವೇರಿಯ ರಾಣೆಬೆನ್ನೂರ ಹಾಗೂ ಹುಬ್ಬಳ್ಳಿಯಲ್ಲಿ ಬೋಂಡಾ, ಭಜ್ಜಿ, ಟೀ ಮಾರಿ ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

ಪ್ರತಿಭಟನೆ
ಪ್ರತಿಭಟನೆ

By

Published : Apr 2, 2021, 5:11 PM IST

ಹಾವೇರಿ/ಹುಬ್ಬಳ್ಳಿ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿ ಹಾಗೂ ಹುಬ್ಬಳ್ಳಿಯಲ್ಲಿ ಸಾರಿಗೆ ನೌಕರರು ವಿಭಿನ್ನವಾಗಿ ಪ್ರತಿಭಟನೆ ಮಾಡಿದರು.

ಆರನೇ ವೇತನ ಆಯೋಗ ಜಾರಿ, ಆರೋಗ್ಯ ಭಾಗ್ಯ ವಿಮಾ ಯೋಜನೆ, ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿದರು. ಇದೇ ವೇಳೆ, ಹಾವೇರಿಯ ರಾಣೆಬೆನ್ನೂರ ಹಾಗೂ ಹುಬ್ಬಳ್ಳಿಯಲ್ಲಿ ಬೋಂಡಾ, ಭಜ್ಜಿ, ಟೀ ಮಾರಿದ ನೌಕರರು ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿ, ಹಾವೇರಿಯಲ್ಲಿ ವಿಭಿನ್ನ ಪ್ರತಿಭಟನೆ

ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದ್ರೆ ಇಲ್ಲಿಯವರೆಗೂ ಪೂರೈಸಿಲ್ಲ. ಹಾಗಾಗಿ ಹುಬ್ಬಳ್ಳಿಯಲ್ಲಿ ಏ. 7ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ABOUT THE AUTHOR

...view details