ಹಾವೇರಿ :ರಾಜ್ಯ ಹೆದ್ದಾರಿ ಅಗಲೀಕರಣ ಹಿನ್ನೆಲೆ ಹಲವು ವರ್ಷಗಳಿಂದ ಬೆಳೆದು ನಿಂತಿರುವ ಮರಗಳನ್ನು ನೆಲಕುರುಳಿಸಲು ನಿರ್ಧರಿಸಿದ್ದು, ಪರಿಸರ ಪ್ರೇಮಿಗಳು ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ಇರುವ ಸಮ್ಮಸಗಿ-ಬಿಳಿಗಿರಿರಂಗನಬೆಟ್ಟ ರಾಜ್ಯ ಹೆದ್ದಾರಿ ಅಗಲೀಕರಣ ಮಾಡಲಾಗುತ್ತಿದೆ. ರಸ್ತೆ ಅಗಲೀಕರಣಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿ ಬೆಳೆದು ನಿಂತಿರುವ ದೊಡ್ಡ ದೊಡ್ಡ ಮರಗಳಿಗೆ ಕೊಡಲಿ ಹಾಕಲಾಗ್ತಿದೆ.