ಹಾವೇರಿ : ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಪ್ರತಿಭಟನೆಯಲ್ಲಿ ರೈತರಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನೇಣು ಹಾಕಿಕೊಳ್ಳಲು ರೈತರು ಮುಂದಾಗಿದ್ದರು. ರೈತರನ್ನು ಪೊಲೀಸರು ತಡೆದು ನೇಣು ಹಾಕಿಕೊಳ್ಳಲು ತಂದಿದ್ದ ಹಗ್ಗ ಕಸಿದುಕೊಳ್ಳಲಾಯಿತು.
ಹಾವೇರಿ: ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಇಬ್ಬರು ರೈತರು - ಪ್ರತಿಭಟನೆಯಲ್ಲಿ ರೈತರಿಬ್ಬರು ಆತ್ಮಹತ್ಯೆಗೆ ಯತ್ನ
ನಗರದಲ್ಲಿ ವಿವಿಧ ರೈತ ಸಂಘಟನೆಗಳು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ರೈತ ಸಂಘದ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು.
ಪ್ರತಿಭಟನೆಯಲ್ಲಿ ರೈತರಿಬ್ಬರು ಆತ್ಮಹತ್ಯೆಗೆ ಯತ್ನ
ನಗರದಲ್ಲಿ ವಿವಿಧ ರೈತ ಸಂಘಟನೆಗಳು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ರೈತ ಸಂಘದ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು. ಜಿಲ್ಲಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟುಗಳು ನಿತ್ಯದಂತೆ ಆರಂಭವಾಗಿದ್ದು, ಬಸ್ ಮತ್ತು ವಾಹನಗಳು ಎಂದಿನಂತೆ ಸಂಚರಿಸಿದವು.
ಶಾಲಾ ಕಾಲೇಜುಗಳಿಗೆ ಓಪನ್ ಆಗಿವೆ. ಒಟ್ಟಾರೆ ಜಿಲ್ಲೆಯಲ್ಲಿ ಭಾರತ್ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತೆ ಸಾಗಿದೆ.