ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಮತ್ತೆರಡು ಕೊರೊನಾ ಕೇಸ್​​ ಪತ್ತೆ: ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ

ಹಾವೇರಿಯಲ್ಲಿ ಕೊರೊನಾ ಸೋಂಕಿನಿಂದ 21 ಮಂದಿ ಗುಣಮುಖರಾದ ಬೆನ್ನಲ್ಲೇ ಇಂದು ಮತ್ತೆ ಎರಡು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 9 ವರ್ಷದ ಬಾಲಕ ಹಾಗೂ ಪೊಲೀಸ್​ ಕಾನ್ಸ್​​ಟೇಬಲ್​ಗೆ ಕೊರೊನಾ ದೃಢಪಟ್ಟಿದೆ.

Two more corona cases in Haveri
ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ

By

Published : Jun 15, 2020, 7:13 PM IST

ಹಾವೇರಿ:ಜಿಲ್ಲೆಯಲ್ಲಿ ಕೊರೊನಾ ಸೋಕಿಂತರು ಗುಣಮುಖರಾಗುತ್ತಿರುವ ಬೆನ್ನಲ್ಲೇ ಇಂದು ಮತ್ತಿಬ್ಬರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಲ ಗ್ರಾಮದ ಕಂಟೈನ್ಮೆಂಟ್‌ನಲ್ಲಿದ್ದ 9 ವರ್ಷದ ಮಗುವಿಗೆ ಕೊರೊನಾ ದೃಢಪಟ್ಟಿದ್ದು, ಬ್ಯಾಡಗಿ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್‌ ಓರ್ವರಲ್ಲಿ ಕೊರೊನಾ ಕಾಣಿಸಿಕೊಂಡಿದೆ ಎಂದು ಹೇಳಿದರು.

ಇದರಿಂದಾಗಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಕೊರೊನಾ, ಬ್ಯಾಡಗಿ ತಾಲೂಕಿಗೂ ಸಹ ಕಾಲಿಟ್ಟಂತಾಗಿದೆ. ಇಂದಿನ ಎರಡು ಹೊಸ ಪ್ರಕರಣಗಳೊಂದಿಗೆ ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27ಕ್ಕೇರಿದಂತಾಗಿದೆ. 21 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದು, 6 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್​​ ಕಾನ್ಸ್​​ಟೇಬಲ್​ಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಬ್ಯಾಡಗಿ ಪೊಲೀಸ್ ಠಾಣೆ ಮತ್ತು ಗುತ್ತಲ ಪಟ್ಟಣವನ್ನು ಕಂಟೈನ್​ಮೆಂಟ್​​ ಝೋನ್ ಎಂದು ಘೋಸಿಸಿ ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details