ಹಾವೇರಿ:ಜಿಲ್ಲೆಯಲ್ಲಿ ಗುರುವಾರ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಹಾವೇರಿಯಲ್ಲಿ ಇಂದು ಇಬ್ಬರಲ್ಲಿ ಕೊರೊನಾ ದೃಢ: 18ಕ್ಕೇರಿದ ಸೋಂಕಿತರು - ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ
ಹಾವೇರಿ ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 18ಕ್ಕೇರಿದೆ. ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ 63 ವರ್ಷದ ವ್ಯಕ್ತಿ ಮತ್ತು ಶಿಗ್ಗಾಂವಿ ಮೂಲದ 46 ವರ್ಷದ ಮಹಿಳೆಯಲ್ಲಿ ಸೋಂಕು ಕಂಡುಬಂದಿದೆ.
Haveri district hospital
ಮೇ 19ರಂದು ಮುಂಬೈನಿಂದ ಬಂದಿದ್ದ 46 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಮುಂಬೈನಿಂದ ಪತಿ ಹಾಗೂ ಮಗಳೊಂದಿಗೆ ಕಾರ್ನಲ್ಲಿ ಬಂದು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇದ್ದರು. ಜೂನ್ 1ರಂದು ಇವರ ಪತಿ ಮತ್ತು ಜೂನ್ 2ರಂದು ಮಗಳಲ್ಲಿ ಸೋಂಕು ದೃಢಪಟ್ಟಿತ್ತು.
ಬಂಕಾಪುರದ ಕಂಟೈನ್ಮೆಂಟ್ ವಲಯದಲ್ಲಿದ್ದ ಪಿ-1,691 ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 63 ವರ್ಷದ ವೃದ್ಧರಲ್ಲಿಯೂ ಸೋಂಕು ದೃಢಪಟ್ಟಿದೆ. ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.