ಕರ್ನಾಟಕ

karnataka

ETV Bharat / state

ಕಾರಿಗೆ ಲಾರಿ ಡಿಕ್ಕಿ : ಇಬ್ಬರು ಸ್ಥಳದಲ್ಲೇ ದುರ್ಮರಣ - ಹಾವೇರಿಯಲ್ಲಿ ರಸ್ತೆ ಅಪಘಾತ

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಲಾರಿ ಕಾರಿಗೆ ಗುದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ. ರಾಣೇಬೆನ್ನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..

Two persons died in road accident at Haveri
ಹಾವೇರಿ ರಸ್ತೆ ಅಪಘಾತದಲ್ಲಿ ಇಬ್ಬರು ಸಾವು

By

Published : Feb 4, 2022, 3:37 PM IST

ಹಾವೇರಿ :ಕಾರಿಗೆ ಲಾರಿ ಡಿಕ್ಕಿಯಾಗಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮಾಗೋಡ ಕ್ರಾಸ್ ಬಳಿ ನಡೆದಿದೆ.

ಹಾವೇರಿ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ..

ಬಸವರಾಜ ತೆಗ್ಗಿನಮನಿ (27)ಮತ್ತು ಶಂಕ್ರಪ್ಪ (21) ಎಂಬುವರು ಮೃತರು ಎಂದು ಗುರುತಿಸಲಾಗಿದೆ. ಇವರು ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೈರನಹಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಸೋಮನಾಥ್​​ ಮತ್ತು ಸಂಜೀವ್​​​ ಎಂಬುವರು ಗಾಯಗೊಂಡಿದ್ದು, ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಲಾರಿ ಕಾರಿಗೆ ಗುದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ. ರಾಣೇಬೆನ್ನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಯಾದಗಿರಿ : ₹4,60,000 ಹಣ ದೋಚಿ ಪರಾರಿಯಾದ ಕಳ್ಳ.. ವಿಡಿಯೋ ವೈರಲ್​..

ABOUT THE AUTHOR

...view details