ಹಾವೇರಿ: ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಕರಿ ಗ್ರಾಮದ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು - haveri accident news
ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಬೈಕ್ ಸವಾರ ಸಾವು
ಮೃತ ಬೈಕ್ ಸವಾರನನ್ನು ಶಿವರಾಜ್ ಮಾಳಮ್ಮನವರ್ (21) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಇನ್ನೊಬ್ಬ ಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸಂಬಂಧ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.