ಹಾವೇರಿ: ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು ಒತ್ತಾಯಿಸಿದರು.
ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ - ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು ಒತ್ತಾಯಿಸಿದರು.
ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಓಲೇಕಾರರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ಒಳ್ಳೆಯ ನಾಯಕರು ಎಂದು ಹೆಸರು ಗಳಿಸಿದ್ದಾರೆ. ಹೀಗಾಗಿ ಈ ಬಾರಿ ಅವರಿಗೆ ಸಚಿವ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಿ ಎಂದು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿಕೊಂಡರು.
ಓಲೇಕಾರಗೆ ಸಚಿವ ಸ್ಥಾನ ನೀಡಿದರೆ ಸಮಾಜ ಹಾಗೂ ಕ್ಷೇತ್ರದ ಅಭಿವೃದ್ಧಿ ಆಗಲಿದೆ ಎಂದು ಚಲವಾದಿ ಸಮಾಜದ ಮುಖಂಡರು ಹೇಳಿದರು.