ಕರ್ನಾಟಕ

karnataka

By

Published : Sep 8, 2019, 6:39 PM IST

ETV Bharat / state

ಸಿಎಂ ವಿರುದ್ಧ ವಾಲ್ಮೀಕಿ ಸಮುದಾಯ ಆಕ್ರೋಶ: ಡಿಸಿಎಂ ಸ್ಥಾನ ನೀಡದಿದ್ದರೆ ಪ್ರತಿಭಟನೆ ಎಚ್ಚರಿಕೆ

ಚುನಾವಣೆ ಸಮಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂದು ಆಶ್ವಾಸನೆ ನೀಡಲಾಗಿತ್ತು. ಇದರ ಹಿನ್ನೆಲೆ ಸಮುದಾಯ ಹೆಚ್ಚಾಗಿ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ ಇಂದು ಬಿಜೆಪಿ ಸರ್ಕಾರ ರಚನೆಯಾದರೂ ಕೂಡ ವಾಲ್ಮೀಕಿ ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದೆ ಮತ್ತೆ ಅನ್ಯಾಯ ಮಾಡಿದೆ ಎಂದು ವಾಲ್ಮೀಕಿ ಸಮುದಾಯ ಸಿಎಂ ವಿರುದ್ಧ ಕಿಡಿಕಾರಿದೆ.

ಮುಖ್ಯಮಂತ್ರಿ ವಿರುದ್ಧ ವಾಲ್ಮೀಕಿ ಸಮುದಾಯ ಆಕ್ರೋಶ

ರಾಣೆಬೆನ್ನೂರು: ರಾಜ್ಯ ಬಿಜೆಪಿ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದೆ ಅನ್ಯಾಯ ಮಾಡಿದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ವಿರುದ್ಧ ವಾಲ್ಮೀಕಿ ಸಮುದಾಯ ಆಕ್ರೋಶ

ರಾಣೆಬೆನ್ನೂರು ನಗರದಲ್ಲಿ ಆಯೋಜಿಸಿದ್ದ ಜಿಪಂ ಉಪಾಧ್ಯಕ್ಷರ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ಚುನಾವಣೆ ಸಮಯದಲ್ಲಿ ಬಿಜೆಪಿಯವರು ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಇದರ ಹಿನ್ನೆಲೆ ಸಮುದಾಯ ಹೆಚ್ಚಾಗಿ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ ಇಂದು ಬಿಜೆಪಿ ಸರ್ಕಾರ ರಚನೆಯಾದರೂ ಕೂಡ ವಾಲ್ಮೀಕಿ ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದೆ ಮತ್ತೆ ಅನ್ಯಾಯ ಮಾಡಿದೆ.

ನಾಳೆ ಬೆಂಗಳೂರಿನ ಕೃಷ್ಣಾ ಗೃಹ ಕಚೇರಿಯಲ್ಲಿ 7.5 ಮೀಸಲಾತಿ ಹಾಗೂ ಉಪ ಮುಖ್ಯಮಂತ್ರಿ ಸ್ಥಾನದ ಕುರಿತು ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಇದಕ್ಕೆ ಸರ್ಕಾರ ಸ್ಪಂದನೆ ನೀಡದೆ ಇದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ಮಾಡುವುದಾಗಿ ಪ್ರಸನ್ನಾನಂದ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details