ರಾಣೆಬೆನ್ನೂರು: ತಾಲೂಕಿನ ಹುಲ್ಲತ್ತಿ ಗ್ರಾಮದ ಸ್ಮಶಾನಕ್ಕೆ ರಸ್ತೆ ಕಲ್ಪಿಸಿಕೊಡಬೇಕು ಎಂದು ಹುಲ್ಲತ್ತಿ ಜನರು ಇಂದು ತಹಶೀಲ್ದಾರರಿಗೆ ಮನವಿ ಮಾಡಿದರು.
ಸ್ಮಶಾನ ರಸ್ತೆ ವಿಳಂಬ ಖಂಡಿಸಿ ತಹಶೀಲ್ದಾರರಿಗೆ ಗ್ರಾಮಸ್ಥರ ಮನವಿ
ರಾಣೆಬೆನ್ನೂರು ತಾಲೂಕಿನ ಹುಲ್ಲತ್ತಿ ಗ್ರಾಮದ ಸ್ಮಶಾನಕ್ಕೆ ರಸ್ತೆ ಕಲ್ಪಿಸಿಕೊಡಬೇಕು ಎಂದು ಹುಲ್ಲತ್ತಿ ಜನರು ಇಂದು ತಹಶೀಲ್ದಾರರಿಗೆ ಮನವಿ ಮಾಡಿದರು.
ಈ ಕುರಿತು ಗ್ರಾಮದ ಮುಖಂಡ ಜಗದೀಶ ಕೆರವಡಿ ಮಾತನಾಡಿ, ಗ್ರಾಮದ ಜನರು ಹಲವು ವರ್ಷಗಳಿಂದ ಸ್ಮಶಾನಕ್ಕೆ ದಾರಿಯಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಸತತ ಹೋರಾಟದಿಂದ ಸರ್ವೆ ನಂ.109 ರಲ್ಲಿ ಸ್ಮಶಾನದ ರಸ್ತೆಗಾಗಿ ಭೂ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ 9 ಲಕ್ಷ ರೂಪಾಯಿ ಮಂಜೂರು ಮಾಡಿದೆ. ಆದರೆ, ಈವರೆಗೂ ಉಪವಿಭಾಗಾಧಿಕಾರಿಗಳು ಯಾವುದೇ ಭೂಸ್ವಾಧೀನ ಮಾಡಿಕೊಂಡಿಲ್ಲ. ಇದರಿಂದ ಇಲ್ಲಿನ ಜನರಿಗೆ ತೀವ್ರ ತೊಂದರೆಯಾಗಿದೆ ಎಂದರು.
ಈ ಸಮಸ್ಯೆಯನ್ನು ಅಧಿಕಾರಿಗಳು ಬೇಗನೆ ಸರಿಪಡಿಸಲು ಮುಂದಾಗಬೇಕಾಗಿದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.