ಹಾವೇರಿ: ಕೊರೊನಾದಿಂದ ಮೃತಪಟ್ಟವರನ್ನು ಗ್ರಾಮದ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡುತ್ತಿರುವುದನ್ನು ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ರಾಣೆಬೆನ್ನೂರು ತಾಲೂಕಿನ ಗೋವಿಂದ ಬಡಾವಣೆ ತಾಂಡ ಬಳಿ ನಡೆದಿದೆ.
ಹಾವೇರಿ: ಕೊರೊನಾದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ - ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ
ಹಾವೇರಿಯಲ್ಲಿ ಕೊರೊನಾದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ತಾಲೂಕಿನಲ್ಲಿ ಕೊರೊನಾ ಸೊಂಕಿನಿಂದ ಮೃತಪಟ್ಟವರನ್ನು ಅಂತ್ಯಕ್ರಿಯೆ ಮಾಡಲು ಜಿಲ್ಲಾಡಳಿತ ಮೆಡ್ಲೇರಿ ರಸ್ತೆಯ ಸರ್ಕಾರಿ ಜಮೀನಿನಲ್ಲಿ ವ್ಯವಸ್ಥೆ ಮಾಡಿದೆ. ಆದರೆ ಈ ಜಮೀನು ಪಕ್ಕದಲ್ಲಿ ಗಂಗಾಜಲತಾಂಡಾ, ಬಸಲೀಕಟ್ಟಿ ತಾಂಡಾ, ಗೋಂವಿಂದ ಬಡಾವಣೆ ಗ್ರಾಮಗಳು ಬರುತ್ತವೆ. ಇಲ್ಲಿ ಅಂತ್ಯಕ್ರಿಯೆ ಮಾಡಿದರೆ ಗ್ರಾಮದ ಜನಕ್ಕೂ ಕೊರೊನಾ ಹರಡಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಗ್ರಾಮದ ಜನರು ನಿನ್ನೆ ರಾಣೆಬೆನ್ನೂರು ಶಾಸಕರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ಅಂತ್ಯಕ್ರಿಯೆ ಮಾಡುವುದಕ್ಕೆ ಅನುವು ಮಾಡಿಕೊಡಬೇಡಿ ಎಂದು ಮನವಿ ಸಹ ಮಾಡಿದ್ದಾರೆ. ಆದರೆ ಶಾಸರು ಕ್ರಮ ಕೈಗೊಳ್ಳದ ಕಾರಣ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.