ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇದೀಗ ಅಕ್ರಮ ಕಲ್ಲು ಗಣಿಗಾರಿಕೆ ನಡೆದಿರುವ ಆರೋಪ ಕೇಳಿ ಬಂದಿದೆ.
ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ - ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮ
ಸುಮಾರು 360 ಎಕರೆ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದರಿಂದಾಗಿ ಈ ಗ್ರಾಮಗಳಿಗೆ ಸೇರಿದ ಹುಲ್ಲುಗಾವಲು ಹಾಳಾಗುತ್ತಿದೆ. ಸರ್ಕಾರದ ನಿಯಮಗಳನ್ನ ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸುವುದರಿಂದ ಗ್ರಾಮಗಳಲ್ಲಿ ಮನೆಗಳು ನಡುಗಿದಂತಾಗುತ್ತದೆ ಎನ್ನುವ ಆರೋಪ ಕೇಳಿ ಬಂದಿದೆ.
![ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ villages in Ranebennur taluk illegal stone mining news](https://etvbharatimages.akamaized.net/etvbharat/prod-images/768-512-9609154-882-9609154-1605887466734.jpg)
ಕಜ್ಜರಿ, ದೇವರಗುಡ್ಡ ಮತ್ತು ಬುಡಪನಹಳ್ಳಿ ಗ್ರಾಮಗಳ ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು 360 ಎಕರೆ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದರಿಂದಾಗಿ ಈ ಗ್ರಾಮಗಳಿಗೆ ಸೇರಿದ ಹುಲ್ಲುಗಾವಲು ಹಾಳಾಗುತ್ತಿದೆ. ಸರ್ಕಾರದ ನಿಯಮಗಳನ್ನ ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸುವುದರಿಂದ ಗ್ರಾಮಗಳಲ್ಲಿ ಮನೆಗಳು ನಡುಗಿದಂತಾಗುತ್ತದೆ. ಶಬ್ದದಿಂದ ಜನ ಜಾನುವಾರುಗಳು ಭಯಭೀತರಾಗಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಕ್ರಮ ಕೈಗೊಳ್ಳಬೇಕು. ಸರ್ಕಾರದ ನಿಯಮಗಳಂತೆ ಕಲ್ಲು ಗಣಿಗಾರಿಕೆ ನಡೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.