ಕರ್ನಾಟಕ

karnataka

ETV Bharat / state

ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಮೃತಪಟ್ಟ 'ವೀರಕೇಸರಿ' - recently haveri updates

ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿಯೊಂದು ಕುಸಿದು ಬಿದ್ದು ಸಾವನಪ್ಪಿರುವ ಘಟನೆ, ಹಾನಗಲ್ ತಾಲೂಕಿನ ಅಕ್ಕಿಆಲೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಆಯೋಜಿಸಿದ್ದ ಕೊಬ್ಬರಿ ಹೋರಿ ಬೆದರಿಸೋ ಸ್ಪರ್ಧೆಗೆ ಭರ್ಜರಿಯಾಗಿ ಬಂದಿದ್ದ ಹೋರಿ, ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದೆ.

ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಮೃತಪಟ್ಟ ವೀರಕೇಸರಿ...

By

Published : Nov 1, 2019, 12:03 AM IST

ಹಾವೇರಿ: ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿಯೊಂದು ಕುಸಿದು ಬಿದ್ದು ಸಾವನಪ್ಪಿರುವ ಘಟನೆ, ಹಾನಗಲ್ ತಾಲೂಕಿನ ಅಕ್ಕಿಆಲೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಆಯೋಜಿಸಿದ್ದ ಕೊಬ್ಬರಿ ಹೋರಿ ಬೆದರಿಸೋ ಸ್ಪರ್ಧೆಗೆ ಭರ್ಜರಿಯಾಗಿ ಬಂದಿದ್ದ ಹೋರಿ, ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದೆ.

ಚಂದ್ರು ಜಗಪತಿ ಎಂಬುವರಿಗೆ ಸೇರಿದ ಹೋರಿ ಇದಾಗಿದ್ದು, ವೀರಕೇಸರಿ ಹೆಸರಿನಲ್ಲಿ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡ್ತಿತ್ತು. ಆದರೆ ವಿಧಿಯಾಟದಿಂದಾಗಿ ಇದ್ದಕ್ಕಿದ್ದಂತೆ ಹೋರಿ ಸಾವನಪ್ಪಿದ್ದನ್ನು ಕಂಡು ಸಾರ್ವಜನಿಕರು ಮರುಗಿದ್ದಾರೆ.

ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಈ ಹೋರಿ ಹಾವೇರಿ, ಶಿವಮೊಗ್ಗ ಸೇರಿದಂತೆ ಅನೇಕ ಕಡೆ ಸ್ಪರ್ಧೆಗಳಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇನ್ನು ಶಾಸ್ತೋಕ್ತವಾಗಿ ಹೋರಿಯ ಅಂತ್ಯಸಂಸ್ಕಾರವನ್ನು ನೆರೆವೇರಿಸಲಾಗಿದೆ.

ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಮೃತಪಟ್ಟ ವೀರಕೇಸರಿ...

ABOUT THE AUTHOR

...view details