ರಾಣೇಬೆನ್ನೂರು: ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ ಜೊತೆ ಮಾತನಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಆರ್.ಶಂಕರ್ಗೆ ಸಚಿವ ಸ್ಥಾನ ನೀಡುವಂತೆ ಸಿಎಂ ಜೊತೆ ಮಾತನಾಡಿದ್ದೇವೆ: ಸಚಿವ ಸೋಮಶೇಖರ್ - ಸಚಿವ ಎಸ್.ಟಿ.ಸೋಮಶೇಖರ
ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಅವರು ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ ಜೊತೆ ಮಾತನಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ನಗರದ ಆರ್.ಶಂಕರ್ ಮನೆಗೆ ಔಪಚಾರಿಕವಾಗಿ ಭೇಟಿ ನೀಡಿ ಮಾತನಾಡಿದ ಅವರು, ಸ್ವತಂತ್ರ ಅಭ್ಯರ್ಥಿಯಾದಂತ ಆರ್.ಶಂಕರ್ ಅವರನ್ನು ಕುತಂತ್ರದಿಂದ ಅನರ್ಹ ಮಾಡಲಾಯಿತು. ಇದರಿಂದ ಶಾಸಕ ಸ್ಥಾನ ಕಳೆದುಕೊಂಡರು. ಆದರೂ ಮತ್ತೆ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂತ್ರಿಯಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ. ಈಗಾಗಲೇ ಸಿಎಂ ಯಡಿಯೂರಪ್ಪ ಅವರ ಜೊತೆ ಮಾತನಾಡಲಾಗಿದ್ದು, ಕೊರೊನಾ ಹಿನ್ನೆಲೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗಮನಹರಿಸಿಲ್ಲ ಎಂದರು.
ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಸರ್ಕಾರದ ಸಚಿವರು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ. ಆದರೆ ವಿರೋಧ ಪಕ್ಷದವರು ಸರ್ಕಾರದ ಸಚಿವರಲ್ಲಿ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಯಾವುದೇ ಸಮನ್ವಯದ ಕೊರತೆ ಇಲ್ಲ ಎಂದರು.