ಕರ್ನಾಟಕ

karnataka

ETV Bharat / state

ಹಾವೇರಿ: ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ - ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

17 ವರ್ಷ ಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸಿದ್ದ ಯೋಧನಿಗೆ ಹಾವೇರಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಸಿ ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದರು.

A great welcome to the retired warrior in Haveri
ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

By

Published : Apr 5, 2021, 1:17 PM IST

ಹಾವೇರಿ : ತಾಲೂಕಿನ ಚಿಕ್ಕಲಿಂಗದಹಳ್ಳಿಯ ಯೋಧ 17 ವರ್ಷ ಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸಿದ್ದು, ಯೋಧನಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದರು.

ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

ಉಳಿವೆಪ್ಪ ನಿಂಗಪ್ಪ ಕಿವುಡೇರ್ ಸೇನೆಯಿಂದ ನಿವೃತ್ತಿಯಾದ ಯೋಧ. ಹಾವೇರಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಸಿದ ಗ್ರಾಮಸ್ಥರು ಭಾರತ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು. ವಿವಿಧೆಡೆಯಿಂದ ಆಗಮಿಸಿದ್ದ ಸೇನಾ ಪ್ರೇಮಿಗಳು ಉಳಿವೆಪ್ಪಗೆ ಮಾಲಾರ್ಪಣೆ ಮಾಡಿದರು.

ನಂತರ ಹೊಸಮನಿ ಸಿದ್ದಪ್ಪ ವೃತ್ತದಿಂದ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆ ನಂತರ ಚಿಕ್ಕಲಿಂಗದಹಳ್ಳಿ ಗ್ರಾಮಕ್ಕೆ ತೆರಳಿತು. ಮೆರವಣಿಗೆಗೆ ಜಾಂಜ್ ಮೇಳದ ಸದ್ದು ಮತ್ತಷ್ಟು ಮೆರುಗು ತಂದಿತ್ತು. ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಉಳಿವೆಪ್ಪ ಗ್ರಾಮಸ್ಥರ ಅಭಿಮಾನಕ್ಕೆ ಸಂತಸ ವ್ಯಕ್ತಪಡಿಸಿದರು. 17 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬಾರದೂರಿಗೆ ಪಯಣಿಸಿದ ಯೋಧರ ನೆನೆದು ಕಣ್ಣೀರ ಕಡಲಾದ ಕುಟುಂಬಸ್ಥರು

ABOUT THE AUTHOR

...view details