ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರದ ಸಾಧನೆ ಏನು?: ಸಿದ್ದರಾಮಯ್ಯಗೆ ಶ್ರೀರಾಮುಲು ಪ್ರಶ್ನೆ - What the Congress government has accomplished in 6 years

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಏನು ಎಂದು ಆರೋಗ್ಯ ಸಚಿವ ಶ್ರೀರಾಮುಲು, ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದರು.

Health minister Ramulu
ಆರೋಗ್ಯ ಸಚಿವ ಶ್ರೀರಾಮುಲು

By

Published : Nov 28, 2019, 5:40 PM IST

ರಾಣೆಬೆನ್ನೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಏನು ಎಂದು ಆರೋಗ್ಯ ಸಚಿವ ಶ್ರೀರಾಮುಲು, ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದರು.

ರಾಣೆಬೆನ್ನೂರಿನಲ್ಲಿ ಬಿಜೆಪಿ ಎಸ್ಟಿ ಮೊರ್ಚಾ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿ ಹಿಂದುಳಿದ ವರ್ಗಕ್ಕೆ ಏನು ಕೊಡುಗೆ ನೀಡಿದೆ. ಕೊಟ್ಟಿದ್ದರೆ ಬಹಿರಂಗ ಚರ್ಚೆಗೆ ಬನ್ನಿ. ಕುಮಾರಸ್ವಾಮಿ ಸಿಎಂ ಇದ್ದಾಗ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದ್ದರು ಎಂದು ದೂರಿದರು.

ಆರೋಗ್ಯ ಸಚಿವ ಶ್ರೀರಾಮುಲು

ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ಕೊಡ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಹೇಳಿದರು. ಈಗ ತಿರುಚಿದ್ದಾರೆ. ಸಿದ್ದರಾಮಯ್ಯ ಸದ್ಯ ಕಾಂಗ್ರೆಸ್​ನಲ್ಲಿ ಸಿಂಗಲ್ ಸ್ಟಾರ್ ಥರ ಮೆರೆಯುತ್ತಿದ್ದಾರೆ. ಅವರು ಎಲ್ಲರನ್ನು ತುಳಿದು ಬೆಳೆದವರೇ ಹೊರತು ಯಾರನ್ನೂ ಬೆಳೆಸುವ ಗೋಜಿಗೆ ಹೋಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ABOUT THE AUTHOR

...view details