ಹಾವೇರಿ:ಅಕಾಲಿಕ ಮಳೆ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಸಿದೆ. ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಗುತ್ತಲ ಪಟ್ಟಣದ ಕುಂಬಾರಗೇರಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನ (42) ವರ್ಷದ ಮಮ್ತಾಜ್ ಬಾಲೇಬಾಯಿ ಎಂದು ಗುರುತಿಸಲಾಗಿದೆ. ಸಂಜೆ ಏಳು ಗಂಟೆ ಸುಮಾರಿಗೆ ಗುಡುಗು, ಸಿಡಿಲು ಮತ್ತು ಭಾರಿ ಗಾಳಿಯೊಂದಿಗೆ ಮಳೆ ಸುರಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಹಾವೇರಿ: ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವು - ಹಾವೇರಿಯಲ್ಲಿ ಮನೆ ಮೇಲ್ಛಾವಣಿ ಕುಸಿದು ಮಹಿಳೆ ಮೃತ
ಮಂಗಳವಾರ ಸಂಜೆ ಸುರಿದ ಮಳೆಗೆ ಗುತ್ತಲ ಪಟ್ಟಣದ ಹಲವೆಡೆ ವಿದ್ಯುತ್ ಕಂಬ ಮತ್ತು ಮರಗಳು ಧರೆಗುರುಳಿವೆ. ಕೆಲ ಮನೆಗಳ ಮೇಲೂ ಸಹ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ.
ಮನೆಯ ಮೇಲ್ಛಾವಣಿ ಕುಸಿದಿರುವುದು
ಸ್ಥಳಕ್ಕೆ ಗುತ್ತಲ ಠಾಣೆ ಪಿಎಸ್ಐ ಜಗದೀಶ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಜೆ ಸುರಿದ ಮಳೆಗೆ ಗುತ್ತಲ ಪಟ್ಟಣದ ಹಲವೆಡೆ ವಿದ್ಯುತ್ ಕಂಬ ಮತ್ತು ಮರಗಳು ಧರೆಗುರುಳಿವೆ. ಕೆಲ ಮನೆಗಳ ಮೇಲೂ ಸಹ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.
ಓದಿ:ವಿಜಯಪುರದಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರ: ಮೂವರ ಸ್ಥಿತಿ ಗಂಭೀರ