ರಾಣೆಬೆನ್ನೂರ: ಕಬ್ಬು ತುಂಬಿಕೊಂಡು ಹೋಗುತ್ತಿರುವ ಟ್ರಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ಡಿಯೋಲ್ ಡಾಬಾ ಬಳಿ ನಡೆದಿದೆ.
ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ; ಮಹಿಳೆ ಸಾವು.. ಮೂವರಿಗೆ ಗಂಭೀರ ಗಾಯ - ಮಹಿಳೆ ಸಾವು
ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಕಬ್ಬಿನ ಟ್ರಾಕ್ಟರಗೆ ಕಾರು ಡಿಕ್ಕಿ ಮಹಿಳೆ ಸಾವು
ಮೃತ ಮಹಿಳೆಯ ನಿಖರ ಮಾಹಿತಿ ತಿಳಿದು ಬಂದಿಲ್ಲ, ಅಲ್ಲದೆ ಕಾರಿನಲ್ಲಿದ್ದ ಮೂವರಿಗೆ ತೀವ್ರ ಗಾಯಗಳಾಗಿದ್ದು, ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಭಟ್ಕಳ: ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
Last Updated : Jan 10, 2021, 1:15 PM IST