ಹಾವೇರಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡಮಗ್ಗಿ ಗ್ರಾಮದಲ್ಲಿ ಕಂಡುಬಂದಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವಪತ್ತೆ : ಗಂಡನ ಮನೆಯವರ ವಿರುದ್ಧ ಕೊಲೆ ಆರೋಪ - ಹಾವೇರಿ ಮಹಿಳೆ ಕೊಲೆ ಸುದ್ದಿ
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಹಿರೇಕೆರೂರು ತಾಲೂಕಿನ ಕೋಡಮಗ್ಗಿ ಗ್ರಾಮದಲ್ಲಿ ಕಂಡುಬಂದಿದೆ.

ಮಹಿಳೆಯ ಮೃತದೇಹ ಪತ್ತೆ
ಮಹಿಳೆಯ ಮೃತದೇಹ ಪತ್ತೆ
ಪ್ರಿಯಾಂಕ ನಾಯ್ಕ (25) ಮೃತ ಮಹಿಳೆ. ಪತಿ ವಿಜಯ ಬೋಜಾ ನಾಯ್ಕ ಕೊಲೆ ಮಾಡಿದ್ದಾನೆ ಎಂದು ಮೃತಳ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಪತಿ ಹಾಗೂ ಆತನ ಕುಟುಂಬಸ್ಥರು ಪ್ರಿಯಾಂಕಾಳನ್ನು ಹೊಡೆದು ಕೊಲೆ ಮಾಡಿ, ನಂತರ ನೇಣು ಬಿಗಿದಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಇನ್ನು ಘಟನೆ ನಂತರ ಪತಿ ವಿಜಯ ಮತ್ತು ಆತನ ಕುಟುಂಬಸ್ಥರು ಮನೆಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.