ಹಾವೇರಿ: ಜಿಲ್ಲೆಯಾದ್ಯಂತ ಉಂಟಾದ ಅತಿವೃಷ್ಟಿ ಮತ್ತು ಮಳೆಯಿಂದಾದ ಹಾನಿಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದರು.
ಹಾವೇರಿ, ಹಿರೇಕೆರೂರಿಗೆ ಬಿಎಸ್ವೈ ಭೇಟಿ: ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚೆ - Yadiyurappa visited Haveri and hirekeruru
ಸಿಎಂ ಯಡಿಯೂರಪ್ಪ ಇಂದು ಹಾವೇರಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಹಾವೇರಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ನಂತರ ಅನರ್ಹ ಶಾಸಕ ಬಿ.ಸಿ ಪಾಟೀಲ್ ಕ್ಷೇತ್ರಕ್ಕೆ ಭೇಟಿ ನೀಡಿದರು.
ನಗರದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲೆಯಲ್ಲಿ ಉಂಟಾದ ಹಾನಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಗೋವಿಂದ ಕಾರಜೋಳ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗಿಯಾಗಿದ್ದರು.
ಬಿ.ಸಿ.ಪಾಟೀಲ್ ಕ್ಷೇತ್ರಕ್ಕೆ ಬಿ.ಎಸ್.ವೈ: ಹಾವೇರಿ ಜಿಲ್ಲೆ ಪ್ರವಾಸದಲ್ಲಿರುವ ಬಿಎಸ್ವೈ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಕ್ಷೇತ್ರಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇನ್ನು ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಹೂಮಾಲೆ ಹಾಕುವ ಮೂಲಕ ಬಿ.ಸಿ ಪಾಟೀಲ್ ಸ್ವಾಗತ ಕೋರಿದ್ದರು