ಹಾನಗಲ್: ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹೊಡೆದು ಕೊಲೆ ಮಾಡಿ ಮೃತದೇಹ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಹಾನಗಲ್: ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ...! - hanagal
ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿ
ಸಂತೋಷ ವಾಲೀಕಾರ (32 ವರ್ಷ) ಎಂಬುವವರ ಮೃತದೇಹ ಪತ್ತೆಯಾಗಿದ್ದು, ಯುವಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಸಂಬಂಧಿಕರಿಂದ ಹತ್ಯೆಗೊಳಗಾಗಿರುವ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಹಾನಗಲ್ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಪ್ರಕರಣ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.