ಹಾವೇರಿ: ಹಸುವಿಗೆ ನೀರು ಕುಡಿಸಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ನಡೆದಿದೆ.
ಹಸುವಿಗೆ ನೀರು ಕುಡಿಸಲೋದ ಯುವಕ ಕೆರೆಯಲ್ಲಿ ಮುಳುಗಿ ಸಾವು - young man fallen in lake Haveri
ಹಸುವಿಗೆ ನೀರು ಕುಡಿಸಲು ಹೋಗಿ ಯುವಕನೋರ್ವ ನೀರುಪಾಲಾಗಿರುವ ಘಟನೆ ಶಿಗ್ಗಾಂವಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ನಡೆದಿದೆ.
ಆಕಳಿಗೆ ನೀರು ಕುಡಿಸಲು ಹೋದ ಯುವಕ ನೀರು ಪಾಲು
ಪ್ರದೀಪ ಲಮಾಣಿ (18) ಮೃತ ಯುವಕ. ಹಸುಗೆ ನೀರು ಕುಡಿಸಲು ಹೋಗಿದ್ದ ವೇಳೆ ಪ್ರದೀಪ್ ಕಾಲು ಜಾರಿ ಕೆರೆಗೆ ಬಿದ್ದಿದ್ದ. ನೀರು ಪಾಲಾದ ಯುವಕನಿಗಾಗಿ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ.
ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.