ಹಾವೇರಿ: ದನ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ಯುವಕನಿಗೆ ಹೋರಿ ತಿವಿದು ಯುವಕ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಲ್ಲಿ ನಡೆದಿದೆ.
ಮೃತ ಯುವಕನನ್ನ ಮಂಜುನಾಥ್ ಮೈಲಾರಪ್ಪ ಚಳ್ಳಕ್ಕನವರ್ (29) ಎಂದು ಗುರುತಿಸಲಾಗಿದೆ. ಮಂಜುನಾಥ್ ಹಾವೇರಿ ತಾಲೂಕು ಸಂಗೂರು ಗ್ರಾಮದವನು ಎನ್ನಲಾಗಿದೆ. ಚಿಕ್ಕಬಾಸೂರಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಜ್ಯಮಟ್ಟದ ದನಬೆದರಿಸುವ ಸ್ಪರ್ಧೆಯಲ್ಲಿ ಈ ದುರ್ಘಟನೆ ನಡೆದಿದೆ.