ಕಲಬುರಗಿ:ಅರಸು ಸಾಂಸ್ಕೃತಿಕ ವೇದಿಕೆ ವತಿಯಿಂದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 104ನೇ ಜನ್ಮದಿನಾಚರಣೆ ಅಂಗವಾಗಿ ಕಲಬುರಗಿಯ ಕನ್ನಡ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.
ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 104ನೇ ಜನ್ಮದಿನಾಚರಣೆ.. - ಇತ್ತೀಚಿನ ಕಲಬುರಗಿಯ ಸುದ್ದಿ
ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ 104 ನೇ ಜನ್ಮದಿನಾಚರಣೆ ಅಂಗವಾಗಿ ಅರಸು ಸಾಂಸ್ಕೃತಿಕ ವೇದಿಕೆ ವತಿಯಿಂದ ಕಲಬುರಗಿಯ ಕನ್ನಡ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.
ಡಿ ದೇವರಾಜ ಅರಸು ಅವರ 104 ನೇ ಜನ್ಮದಿನಾಚರಣೆ
ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಉದ್ಘಾಟಿಸಿ, ಕಾರ್ಯಕ್ರಮದಲ್ಲಿ ದೇವರಾಜ್ ಅರಸು ಅವರ ಜೀವನ, ಸಾಧನೆ ಹಾಗೂ ಕೊಡುಗೆಗಳನ್ನು ಸ್ಮರಿಸಲಾಯಿತು. ಇದೇ ವೇಳೆ ವಿವಿಧ ಇಲಾಖೆಯಲ್ಲಿ ಸಾಧನೆಗೈದ ಗಣ್ಯರಿಗೆ ದೇವರಾಜ ಅರಸು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಸಮಾರಂಭದಲ್ಲಿ, ಪ್ರಾಧ್ಯಾಪಕಿ ಡಾ.ಜಯದೇವಿ ಗಾಯಕವಾಡ್ ಅವರು ದೇವರಾಜ್ ಅರಸ್ ಆಡಳಿತ-ಸಮಾಜ ಸುಧಾರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.