ಕಲಬುರ್ಗಿ :14 ದಿನದ ಹೋಂ ಕ್ವಾರಂಟೈನ್ ನಂತರವೂ ಕೊರೊನಾ ಲಕ್ಷಣಗಳು ಕಂಡು ಬರುವ ಸಾಧ್ಯತೆಗಳಿರುವ ಕಾರಣಕ್ಕೆ ಮತ್ತೆ 14 ದಿನ ಹೋಂ ಕ್ವಾರಂಟೈನ್ಮುಂದುವರೆಸುವಂತೆ ಡಿಸಿಎಂ ಗೋವಿಂದ ಕಾರಜೋಳ ಜಿಲ್ಲಾಧಿಕಾರಿ ಶರತ್ ಬಿ ಅವರಿಗೆ ಸೂಚನೆ ನೀಡಿದ್ದಾರೆ.
ಹೋಂ ಕ್ವಾರಂಟೈನ್ನ 28 ದಿನಕ್ಕೇರಿಸಿ.. ಅಧಿಕಾರಿಗಳಿಗೆ ಡಿಸಿಎಂ ಕಾರಜೋಳ ಸಲಹೆ
ಇಡೀ ದೇಶದಲ್ಲಿಯೇ ಲಾಕ್ಡೌನ್ ಜಾರಿಯಲ್ಲಿದ್ದರೂ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ವಾಹನಗಳನ್ನು ಸೀಜ್ ಮಾಡುವಂತೆ ಸೂಚನೆ ನೀಡಿದರು.
14 ದಿನದ ಹೋಮ್ ಕ್ವಾರಂಟೈನ್ನನ್ನ 28 ದಿನ ಮಾಡಿ: ಸಚಿವ ಗೋವಿಂದ ಕಾರಜೋಳ
ಜಿಲ್ಲೆಯಲ್ಲಿ ಕೊರೊನಾ ವೈರಸ್ ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಕಂಡು ಬಂದ ಕೊರೊನಾ ವೈರಸ್ ವಿವರ ಹಾಗೂ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಜತೆಗೆ ಒಂದಿಷ್ಟು ಸಲಹೆ, ಸೂಚನೆಗಳನ್ನು ನೀಡಿದ್ರು.
ಇಡೀ ದೇಶದಲ್ಲಿಯೇ ಲಾಕ್ಡೌನ್ ಜಾರಿಯಲ್ಲಿದ್ದರೂ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ವಾಹನಗಳನ್ನು ಸೀಜ್ ಮಾಡುವಂತೆ ಸೂಚನೆ ನೀಡಿದರು.