ಕಲಬುರಗಿ :ಹೂಮಳೆ ಸಾಕು ವೇತನ ಬೇಕು ಎಂದು ಘೋಷಣೆ ಕೂಗಿ ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
15ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಎಐಯುಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ. ಮಾಸಿಕ 12 ಸಾವಿರ ರೂಪಾಯಿ ಗೌರವ ಧನ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ 15ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆ ಕೆಲಸ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರೆಸಿದ್ದಾರೆ.
ಬೇಡಿಕೆ ಈಡೇರಿಸದ ಸರ್ಕಾರದ ಕ್ರಮ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ಆಶಾ ಕಾರ್ಯಕರ್ತೆಯರು, ನಮಗೆ ಗೌರವ ಧನ ಹೆಚ್ಚಿಸಬೇಕು. ಸೇವಾ ಭದ್ರತೆ ಒದಗಸಿಬೇಕು. ಕೊರೊನಾದ ಕರ್ತವ್ಯದ ಹಿನ್ನೆಲೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.