ಕಲಬುರಗಿ:ಜಿಲ್ಲಾ ಆರ್ಯ ಈಡಿಗ ಸಮಾಜ, ಜಿಲ್ಲಾಡಳಿತ ಮತ್ತಿತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯುತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಚಾಲನೆ ನೀಡಿದರು. ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ನಗರ ಪೋಲಿಸ್ ಆಯುಕ್ತ ಡಿ.ಕಿಶೋರ್ ಬಾಬು ಮತ್ತಿತರರು ಉಪಸ್ಥಿತರಿದ್ದರು. ಜಯಂತ್ಯುತ್ಸವದ ಅಂಗವಾಗಿ ಜನಪದ ಕಲಾ ತಂಡಗಳ ನೇತೃತ್ವದಲ್ಲಿ ಸರ್ದಾರ್ ಪಟೇಲ್ ವೃತ್ತದಿಂದ ರಂಗಮಂದಿರದವರೆಗೆ ನಾರಾಯಣ ಗುರುಗಳ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.