ಕರ್ನಾಟಕ

karnataka

ETV Bharat / state

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ..! - girl dies of COVID-19 in Kalaburagi

ಕಲಬುರಗಿಯಲ್ಲಿ ಕೊರೊನಾದಿಂದ 17 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೃತಪಟ್ಟ ಎರಡು ದಿನಗಳ ನಂತರ ಆಕೆಗೆ ಸೋಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ.

17 year old girl dies of COVID-19 in Kalaburagi
ಸಂಗ್ರಹ ಚಿತ್ರ

By

Published : Jun 9, 2020, 7:36 PM IST

ಕಲಬುರಗಿ: ಕೊರೊನಾಕ್ಕೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. 17 ವರ್ಷದ ಬಾಲಕಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಳೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಜ್ವರ, ತೀವ್ರ ಉಸಿರಾಟ, ನರ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ 17 ವರ್ಷದ ಬಾಲಕಿಯನ್ನು ಜೂ. 4 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಅಂದು ರಾತ್ರಿ ಜಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.

ಇಂದು ಕೊರೊನಾ ವರದಿ ಬಂದಿದ್ದು, ಬಾಲಕಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆಳಂದ ನಿವಾಸಿಯಾದ ಈಕೆ ಇತರೆ ಕಾಯಿಲೆಗಳಿಂದಲೂ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಈಕೆಯ ಟ್ರಾವೆಲ್ ಹಿಸ್ಟರಿ ಬಗ್ಗೆ ಜಿಲ್ಲಾಡಳಿತ ಮಾಹಿತಿ ಕಲೆ ಹಾಕುತ್ತಿದೆ.

ಮೃತ ಬಾಲಕಿ ಸೇರಿ ಇಂದು 10 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 9 ಸೋಂಕಿತರನ್ನು ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 769ಆಗಿದ್ದರೆ ಮೃತರ ಸಂಖ್ಯೆ 8ಕ್ಕೇರಿದೆ. ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 213 ಇದ್ದರೆ ಇನ್ನೂ 548 ಪ್ರಕರಣಗಳು ಸಕ್ರಿಯವಾಗಿವೆ.

ABOUT THE AUTHOR

...view details