ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ನಾಲ್ವರು ಪುರುಷರು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 111ಕ್ಕೆ ಏರಿಕೆಯಾಗಿದೆ.
ಕಲಬುರಗಿ : 170 ಜನರಿಗೆ ಸೋಂಕು ದೃಢ, 369 ಮಂದಿ ಗುಣಮುಖ - Kalaburgi coronavirus news
ಕಲಬುರಗಿ ಜಿಲ್ಲೆಯಲ್ಲಿ ಇಂದು 369 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,318 ಕ್ಕೆ ಏರಿಕೆಯಾಗಿದೆ
ಕಲಬುರಗಿ ಕೊರೊನಾ ವೈರಸ್ ನ್ಯೂಸ್
35 ವರ್ಷದ ಪುರುಷ, 58 ವರ್ಷದ ಪುರುಷ, 51 ವರ್ಷದ ಮಹಿಳೆ, 70 ವರ್ಷದ ಪುರುಷ ಹಾಗೂ 65 ವರ್ಷದ ಪುರುಷ ಸಾವನ್ನಪ್ಪಿದ್ದಾರೆ. ದಿನೆ ದಿನೇ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇನ್ನೊಂದಡೆ ಜಿಲ್ಲೆಯಲ್ಲಿ ಇಂದು 170 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5,937 ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 369 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,318 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2,508 ಆ್ಯಕ್ಟಿವ್ ಕೇಸ್ಗಳಿವೆ.