ಕಲಬುರಗಿ:ಜಿಲ್ಲೆಯ ಕಡಗಂಚಿ ಬಳಿಯ ಕೇಂದ್ರಿಯ ವಿಶ್ವವಿದ್ಯಾಲಯದ 18 ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಟಪಟ್ಟಿದೆ. ದೇಶದ ಹಲವೆಡೆಯಿಂದ ವ್ಯಾಸಂಗಕ್ಕೆ ಆಗಮಿಸಿದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ಪಷ್ಟಣೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಶರಣ ಬಸಪ್ಪ ಗಣಜಲಖೇಡ, ವಿವಿಧೆಡೆಯಿಂದ ಬಂದಿರುವ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಅವರ ಸಂಪರ್ಕದಲ್ಲಿ ಬಂದಿರುವ ವಿದ್ಯಾರ್ಥಿಗಳ ಸ್ವಾಬ್ ಮಾದರಿ ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೆರೆಡು ದಿನಗಳಲ್ಲಿ ವರದಿ ಬರುವ ನಿರೀಕ್ಷೆ ಇದೆ. ವಿವಿಯಲ್ಲಿ ಒಂದು ಐಸೋಲೇಶನ್ ಸೆಂಟರ್ ತೆರೆಯಲಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.