ಕಲಬುರಗಿ: ಮಹಾಮಾರಿ ಕೊರೊನಾ ಸೋಂಕಿನಿಂದ ಜಿಲ್ಲೆಯ ನಾಲ್ವರು ಬಲಿಯಾಗಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ.
72 ವರ್ಷದ ವೃದ್ಧೆ, 60 ವರ್ಷದ ವೃದ್ಧೆ, 57 ವರ್ಷದ ಮಹಿಳೆ ಹಾಗೂ 65 ವರ್ಷದ ವೃದ್ಧ ಸೋಂಕಿಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 179ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 210 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,629ಕ್ಕೆ ತಲುಪಿದೆ. 176 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,554 ಮಂದಿ ಕೊರೊನಾ ಗೆದ್ದು ಬಂದಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 1,896 ಸಕ್ರಿಯ ಪ್ರಕರಣಗಳಿವೆ.